2:27 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿಯ ಹಲವೆಡೆ ರಸ್ತೆಯಲ್ಲೇ ನೀರು: ಜನ ಸಾಮಾನ್ಯರ ಪರದಾಟಕ್ಕಿಲ್ಲ ಕಾಸಿನ ಬೆಲೆ

September 11, 2020, 6:14 AM

ಮಂಗಳೂರು(reporterkarnataka news)ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ನದಿ, ಕೆರೆ, ಹಳ್ಳ- ಕೊಳ್ಳ ತುಂಬಿದೆ.

ಮಂಗಳೂರಿನಲ್ಲಿ ಬಹುತೇಕ ತಗ್ಗು ಪ್ರವೇಶಗಳು ಜಲಾವೃತವಾಗಿವೆ. ನಗರದಲ್ಲಿ ಹಲವೆಡೆ ರಸ್ತೆಗೆ ನೀರು ಬಿದ್ದು ಜನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ನಗರದ ಕದ್ರಿಕಂಬಳ, ಮಾಲೆಮಾರ್, ಕೊಟ್ಟಾರ ಚೌಕಿ, ಕುದ್ರೋಳಿ ಸಮೀಪ, ಅತ್ತಾವರ ಮುಂತಾದ ಕಡೆಗಳಲ್ಲಿ ರಸ್ತೆ ಮೇಲೆ ನೀರು ನಿಂತಿದೆ. ನಗರದ ಹೊರವಲಯದ ಅಡ್ಯಾರ್, ಅರ್ಕುಳದ ತಗ್ಗು ಪ್ರದೇಶ ಜಲಾವೃತವಾಗಿದೆ.

ಜಿಲ್ಲೆಯಲ್ಲಿ ಶುಕ್ರವಾರ ಮತ್ತು ಶನಿವಾರ 204.5 ಮಿಮೀ. ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಹಾಗೂ ಮೀನುಗಾರರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರುವಂತೆ ಹಾಗೂ ಪಿಡಿಒ ಮತ್ತು ಗ್ರಾಮಕರಣಿಕರು ವಿಪತ್ತು ಎದುರಾದ ಸಂದರ್ಭದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ. ವಿಪತ್ತು ನಿರ್ವಹಣೆಗೆ ದಿನದ 24 ಗಂಟೆ ಕಂಟ್ರೋಲ್ ರೂಂ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಟೋಲ್ ಫ್ರಿ ನಂಬರ್ 1077 ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು