10:48 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ:ಮಂಗಳೂರಿನಲ್ಲಿ ಕಟ್ಟೆಚ್ಚರ, ಆರ್ ಎಎಫ್, ಕೆಎಸ್ ಆರ್ ಪಿ ತುಕಡಿ ನಿಯೋಜನೆ

August 15, 2020, 4:57 AM

ಮಂಗಳೂರು(reporterkarnataka news): ಬೆಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 

ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕ್ಷಿಪ್ರ ಕ್ರಿಯಾ ಪಡೆ( ಆರ್ ಎಎಫ್) ನಗರದ ಮೇಲೆ ಕಣ್ಗಾವಲಿಟ್ಟಿದೆ.

ಬೆಂಗಳೂರಿನಲ್ಲಿ ಮೊನ್ನೆ ನಡೆದ ಗಲಭೆ ಹಾಗೂ ಪೌರತ್ವ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದಲ್ಲದೆ ಗುರುವಾರ ತಡರಾತ್ರಿ ನಗರದ ಪಾಂಡೇಶ್ವರದಲ್ಲಿರುವ ಅಲ್ಪ ಸಂಖ್ಯಾತ ಭವನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಕಟ್ಟಡ ಮುಂಭಾಗದಲ್ಲಿ ಅಳವಡಿಸಿದ್ದು ಗಾಜಿಗೆ ಹಾನಿಯಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಥಳದಲ್ಲಿ ಕೆಎಸ್ ಆರ್ ಪಿ ತುಕಡಿಯನ್ನು ನಿಯೋಜಿಸಲಾಗಿದೆ.

ನಗರದ ಆಯಕಟ್ಟಿನ ಪ್ರದೇಶದಲ್ಲಿ ಗುರುವಾರ ಕ್ಷಿಪ್ರ ಕ್ರಿಯಾ ಪಡೆಯ ಯೋಧರು ಪಥ ಸಂಚಲನ ಕೂಡ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು