6:43 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಮಂಗಳೂರಿನ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತರ ಕಚೇರಿ ಎತ್ತಂಗಡಿ ಕೈ ಬಿಟ್ಟ ಕೇಂದ್ರ

September 17, 2020, 9:59 PM

ನವದೆಹಲಿ(reporterkarnataka news): ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತರ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಕೈ ಬಿಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಭರವಸೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರೂ ಹಾಗೂ ಸಂಸತ್ ಸದಸ್ಯರಾಗಿರುವ ನಳೀನ್ ಕುಮಾರ್ ಕಟೀಲ್ ಸಾಮಾಜಿಕ ಜಾಲತಾಣದ ಮೂಲಕ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಇದಕ್ಕಾಗಿ ಅವರು ಹಣಕಾಸು ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಜನ  ಪ್ರತಿನಿಧಿಗಳು ಪಕ್ಷಾತೀತವಾಗಿ ಕಚೇರಿಯನ್ನು ಮಂಗಳೂರಿನಲ್ಲಿ ಉಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಮಂಗಳೂರು ಆದಾಯ ತೆರಿಗೆ ಇಲಾಖೆ ವ್ಯಾಪ್ತಿಯಲ್ಲಿ ನಾಲ್ಕು ಲಕ್ಷ ಆದಾಯ ತೆರಿಗೆ ಪಾವತಿದಾರರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು