1:55 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹೋಟೇಲ್ ಸಿಬ್ಬಂದಿ ಮೇಲೆ ಶೂಟೌಟ್

October 30, 2020, 8:25 PM

ಮಂಗಳೂರು(reporterkarnataka news)

ನಗರದ ಫಳ್ನೀರ್‌ನ ಹೊಟೇಲ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ಮತ್ತು ಫ್ರೆಶ್ ಮಾರ್ಟ್ ಬಳಿ ಘಟನೆ ನಡೆದಿದ್ದು ಒಬ್ಬನಿಗೆ ಗಾಯವಾಗಿದೆ ಎನ್ನಲಾಗಿದೆ.

ಎಂಎಫ್ಸಿ ಹೊಟೇಲಿಗೆ ನಾಲ್ವರು ಬಂದಿದ್ದು ತಿಂಡಿ ಕೇಳಿದ್ದಾರೆ. ತಿಂಡಿ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಅದರಲ್ಲಿ ಒಬ್ಬ ಗ್ರಾಹಕ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ನಾಲ್ವರು ದುಷ್ಕರ್ಮಿಗಳು ಸೇರಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿ ಮಾಡಿದ್ದಾರೆ. ಸ್ಥಳೀಯರು ಸೇರಿದಾಗ, ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಘಟನೆಗೆ ಏನು ಕಾರಣ, ಎಲ್ಲಿಯವರೆಂದು ಗೊತ್ತಾಗಿಲ್ಲ. ಪಾಂಡೇಶ್ವರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು