12:10 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು