ಇತ್ತೀಚಿನ ಸುದ್ದಿ
ಮಂಗಳೂರು ಗಲಭೆ ಪ್ರಕರಣದ 21 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು
September 9, 2020, 2:01 PM

ನವದೆಹಲಿ(reporterkarnataka news): ಪೌರತ್ವ ಕಾಯಿದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 21 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಫೆ. 14ರಂದು ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ರಾಜ್ಯ ಸರಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಾರ್ಚ್ 6ರಂದು ತಡೆಯಾಜ್ಞೆ ನೀಡಿತ್ತು.
ಇದೀಗ ಮಧ್ಯಂತರ ಜಾಮೀನು ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠವು ಜಾಮೀನು ನೀಡಿ ಆದೇಶ ಹೊರಡಿಸಿದೆ.