2:30 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ

21/07/2021, 09:49

ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ರಸ್ತೆಗಳು ಮತ್ತು ಪಾದಚಾರಿ  ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು ಮತ್ತು ನರ್ಸಿಂಗ್ ಹೋಂ ಒಳ ಹಾಗೂ ಹೊರ ಆವರಣಗಳು, ಶಾಲೆ ಕಾಲೇಜುಗಳು ನಡೆಯುತ್ತಿದ್ದಲ್ಲಿ ಅಂತಹ ಶಾಲೆ ಕಾಲೇಜುಗಳ ಒಳ ಹಾಗೂ ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ಮಸೀದಿಗಳಲ್ಲಿ ಹಾಗೂ ಇತರೆ ಧಾರ್ಮಿಕ ಸ್ಥಳ ಹಾಗೂ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಇನ್ನು ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು