8:45 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಡಿಸೆಂಬರ್ 1ರಂದು ಮಂಗಳೂರು ಪುರಭವನದಲ್ಲಿ ಜಿಲ್ಲಾಮಟ್ಟದ ಪಿಎಂ ಸ್ವನಿಧಿ ಬೃಹತ್ ಸಾಲ ಉತ್ಸವ

November 27, 2020, 11:28 PM

ಮಂಗಳೂರು(reporterkarnataka news):

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ’ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ’ (ಪಿಎಂ ಸ್ವನಿಧಿ) ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ’ಪಿಎಂ ಸ್ವನಿಧಿ ಸಾಲ-ಉತ್ಸವ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ  ಡಿಸೆಂಬರ್ ೧ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. 

ಸಂಸದ  ನಳಿನ್ ಕುಮಾರ್ ಕಟೀಲ್‌ ಮುಂದಾಳತ್ವದಲ್ಲಿ ಹಾಗೂ ಶಾಸಕರ ಸಹಕಾರದೊಂದಿಗೆ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ

ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶ ಉದ್ಘಾಟಿಸಲಿದ್ದಾರೆ. ಉತ್ಸವದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸ್ಥಳದಲ್ಲಿಯೇ ಸಾಲ ಮಂಜೂರು ಮಾಡುವುದು, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಮೀನುಗಾರಿಕಾ ಮತ್ತು ಹೈನುಗಾರಿಕೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸುವುದು, ಸಾಲ ಮಂಜೂರಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಪರಿಹರಿಸುವುದು, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳಾದ ಮುದ್ರ, ಪಿಎಂಇಜಿಪಿ, ಪಿಎಂಎವೈ ಮುಂತಾದವುಗಳ ಬಗ್ಗೆ ಮಾಹಿತಿ ನೀಡುವುದು ಮುಂತಾದ ಕಾರ್ಯಕ್ರಮಗಳು ಏಕಕಾಲದಲ್ಲಿ ಜರುಗಲಿವೆ. ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ವಿವಿಧ ಬ್ಯಾಂಕುಗಳು ತಮ್ಮ ಕೌಂಟರ್‌ಗಳನ್ನು ಈ ಸಮಾವೇಶದಲ್ಲಿ ಅಳವಡಿಸಲಿದ್ದು, ಸ್ಥಳದಲ್ಲಿಯೇ ಸಾಲ ಮಂಜೂರಾತಿಗೆ ಕ್ರಮಕೈಗೊಳ್ಳಲಿವೆ. ಹಾಗೂ ಬೀದಿಬದಿವ್ಯಾಪಾರಿಗಳು ಡಿಜಿಟಲ್ ಪಾವತಿಗಾಗಿ QR code/UPID ಸೌಲಭ್ಯವನ್ನು ಮೊಬೈಲ್ ಫೋನ್‌ಗಳಲ್ಲಿ ಅಳವಡಿಸಿಕೊಳ್ಳಲು   ’ಫೋನ್ ಪೇ’ ಹಾಗೂ ’ಏರ್‌ಟೆಲ್ ಪೇಮೆಂಟ್ ಬ್ಯಾಂಕ್’ Payment Aggregators ತಮ್ಮ ಸೇವೆಯನ್ನು ಒದಗಿಸಲಿದ್ದಾರೆ. 

ಮಂಗಳೂರು ಮಹಾನಗರಪಾಲಿಕೆ, ಪುತ್ತೂರು ಹಾಗೂ ಉಳ್ಳಾಲ ನಗರಸಭೆ, ಬಂಟ್ವಾಳ, ಮೂಡಬಿದಿರೆ ಹಾಗೂ ಸೋಮೇಶ್ವರ ಪುರಸಭೆ, ಬೆಳ್ತಂಗಡಿ, ಸುಳ್ಯ, ಮೂಲ್ಕಿ, ಕೋಟೆಕಾರ್, ವಿಟ್ಲ ಹಾಗೂ ಕಡಬ ನಗರ ಪಂಚಾಯತ್ ವ್ಯಾಪ್ತಿಗಳಲ್ಲಿ ಬೀದಿಬದಿವ್ಯಾಪಾರ ಮಾಡುತ್ತಿರುವ ಫಲಾನುಭವಿಗಳಿಗೆ ೭% ಬಡ್ಡಿ ಸಹಾಯಧನದೊಂದಿಗೆ ರೂ.೧೦,೦೦೦/- ತುರ್ತುಬಂಡವಾಳವನ್ನು  ಬ್ಯಾಂಕ್ ಸಾಲದ ರೂಪದಲ್ಲಿ (ಒಂದು ವರ್ಷ ಅವಧಿಗೆ) ೧೨ ಮಾಸಿಕ ಕಂತುಗಳಲ್ಲಿ  ಮರುಪಾವತಿಸುವ ಯೋಜನೆ ಇದಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೭,೯೨೧ ಬೀದಿಬದಿ ವ್ಯಾಪಾರಿಗಳಿಗೆ ಈ ಯೋಜನೆಯ ಫಲಾನುಭವಿಗಳನ್ನಾಗಿಸಲು ಗುರಿ ನಿಗದಿಪಡಿಸಲಾಗಿದೆ. ಈಗಾಗಲೆ ಸುಮಾರು ೨೮೫೦ ರಷ್ಟು ಬೀದಿಬದಿ ವ್ಯಾಪಾರಿಗಳ ಅರ್ಜಿಗಳನ್ನು ಬ್ಯಾಂಕ್ ಸಾಲಕ್ಕಾಗಿ ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಲಾಗಿದ್ದು ೧೩೦೦ರಷ್ಟು ಫಲಾನುಭವಿಗಳಿಗೆ ವಿವಿಧ ಬ್ಯಾಂಕುಗಳಿಂದ ಸಾಲ ಮಂಜೂರಾಗಿರುತ್ತದೆ.  ಈ ಯೋಜನೆಯ ಬಗ್ಗೆ  ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ ನಗರಗಳಲ್ಲಿ ಕಾರ್ಯಾಚರಿಸುತ್ತಿರುವ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಮುಂದೆ ಬರುವಂತೆ ಹಾಗೂ ಜಿಲ್ಲೆಗೆ ನಿಗದಿಪಡಿಸಲಾಗಿರುವ ಗುರಿಯನ್ನು ತಲುಪಲು ಸಾಧ್ಯವಾಗುವಂತೆ ಈ  ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು