4:18 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ರಸ್ತೆಯಲ್ಲಿ ನಾಳೆಯಿಂದ ಓಡಾಡಲಿವೆ ದ್ವಿಚಕ್ರ ವಾಹನಗಳು

November 30, 2020, 5:00 PM

ಮಂಗಳೂರು( reporterkarnataka news):

ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ನಾಳೆಯಿಂದ(ಡಿ.1) ದ್ವಿಚಕ್ರ ವಾಹನ ಸಂಚಾರ ನಡೆಸಲಿದೆ.

ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ ವೇಳೆ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಈ ಪರಿಸರದ ಜನರು ಕಾಮಗಾರಿ ವೇಳೆ ಸಾರ್ವಜನಿಕರು ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿಯುಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗನೇ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. 

ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಳಿಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅದ್ಯಕ್ಷರಾದ ಹನುಮಂತ್ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ್ ಪ್ರಭಾ, ಮೆಸ್ಕಾಂ ಅಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು