9:38 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ

September 19, 2020, 12:00 PM

ವರದಿ : ಅನುಷ್ ಪಂಡಿತ್

ಮಂಗಳೂರು (Reporter Karnataka News)

ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಫಿಟ್ ಇಂಡಿಯಾ ಅಭಿಯಾನಕ್ಕೆ ಶುಕ್ರವಾರ ಮಂಗಳೂರಿನ ವಿವಿ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಫಿಟ್ ಇಂಡಿಯಾ ಅಭಿಯಾನವನ್ನು ಉದ್ಘಾಟಿಸಿದರು.
ಅವರು ಮಾತನಾಡಿ ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ. ಆದ್ದರಿಂದ ಇದು ನಾಲ್ಕು ಗೋಡೆಗಳ ಮಧ್ಯೆ ನಡೆಯದೆ ಹೊರಗಡೆ ನಡೆಯಬೇಕಾಗುತ್ತದೆ.

ಭಾರತದಲ್ಲಿ‌ ಯುವ ಸಮುದಾಯ ಹೆಚ್ಚಿದ್ದರೂ, ಹೆಚ್ಚಿನವರಲ್ಲಿ ದೈಹಿಕ ಶ್ರಮತೆ ಕಡಿಮೆಯಾಗಿದೆ. ಇವರನ್ನು ಸರಿದಾರಿಗೆ ತರಬೇಕಾದಲ್ಲಿ ಮೊಟ್ಟ ಮೊದಲಿಗೆ ಯುವಕರ ಮನಸ್ಸು ಆರೋಗ್ಯಪೂರ್ಣವಾಗಿರಬೇಕು‌.

ಅಲ್ಲದೆ ಶಾರೀರಿಕ, ಭೌತಿಕ, ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕವಾಗಿ ಐದು ಆಯಾಮಗಳಲ್ಲಿ ಸದೃಢವಾಗಿರಬೇಕು ಇದರಿಂದ ಅವರು ಸಮಾಜಕ್ಕೆ, ರಾಷ್ಟ್ರಕ್ಕೆ ಕೊಡುಗೆಯಾಗಬಲ್ಲರು‌ ಎಂದು ಪ್ರೊ.ಪಿ ಎಸ್ ಯಡಪಡಿತ್ತಾಯ‌ ಹೇಳಿದರು.

ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರ್ ಗೌರವಾನ್ವಿತ ಅತಿಥಿಯಾಗಿ ಮಾತನಾಡಿ ಜನರರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಅತೀ ಅಗತ್ಯ. ಮಾದಕ ವ್ಯಸನ ಮುಕ್ತ ಸಮಾಜ ಆರೋಗ್ಯಪೂರ್ಣವಾಗಿರುತ್ತದೆ ಪೌಷ್ಟಿಕ ಆಹಾರ ಹಾಗೂ ವ್ಯಾಯಾಮ ದೇಹಕ್ಕೆ ಉಲ್ಲಾಸ ಹಾಗೂ ಸ್ವಚ್ಛತೆಯ ಅರಿವು ಮೂಡಿಸುತ್ತದೆ. ಸ್ವಚ್ಛ ಭಾರತದ ಪರಿಕಲ್ಪನೆಯು ಇದೆ ಆಗಿದೆ.ಎಂದು ಹೇಳಿದರು

ಕಾರ್ಯಕ್ರಮದ ಆಯೋಜಕರಾದ ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಸದೃಢ ದೇಹದಿಂದ ಸದೃಢ ಮನಸ್ಸು, ಸದೃಢ ಮನಸ್ಸಿನಿಂದ ಸದೃಢ ಸಮಾಜ, ಸದೃಢ ಸಮಾಜ ಪ್ರಗತಿಯ ಸಂಕೇತ ಎಂದು ಅವರು ಅಭಿಪ್ರಾಯ ಪಟ್ಟರು.

ಬಳಿಕ ಅಭಿಯಾನದ ಅಂಗವಾಗಿ ಗಿಡ ನೆಡಲಾಯಿತು ಹಾಗೂ ಫಿಟ್ ಇಂಡಿಯಾ ಬ್ಯಾಜ್ ಅನಾವರಣಗೊಳಿಸಲಾಯಿತು.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಡಾ.ದಯಾನಂದ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ರಾಜಶೇಖರ ಹೆಬ್ಬಾರ್, ಮಂಗಳೂರು ವಿವಿ ಕಾಲೇಜಿನ ಪ್ರಿನ್ಸಿಪಾಲ್ ಡಾ.ಉದಯ ಕುಮಾರ್ ಎಂ.ಎ., ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಅಪ್ಪಾಜಿಗೌಡ,
ವಿಶ್ವವಿದ್ಯಾನಿಲಯ ಸಂದ್ಯಾ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ರಾಮಕೃಷ್ಣ ಬಿ.ನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಎನ್. ಎಸ್. ಎಸ್. ಯೋಜನಾಧಿಕಾರಿಗಳು, ಹಾಗೂ ಸ್ವಯಂ ಸೇವಕರು, ಅಧ್ಯಾಪಕ ವೃಂದ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು