ಇತ್ತೀಚಿನ ಸುದ್ದಿ
ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧಿಸಿ ಕರ್ನಾಟಕ ಬಂದ್ ಗೆ ಚಾಲನೆ: ಮಂಡ್ಯದಲ್ಲಿ ಪ್ರತಿಭಟನೆ ಜೋರು
December 5, 2020, 9:19 AM

ಬೆಂಗಳೂರು(reporterkarnataka news): ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಹಲವು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಆರಂಭವಾಗಿದೆ.ಬೆಂಗಳೂರಿನಲ್ಲಿ ಬಂದ್ ತೀವ್ರತೆ ನಿಧಾನವಾಗಿ ಹೆಚ್ಚಾಗುತ್ತಿದೆ.
ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಬಂದ್ ಗೆ ಕರೆ ನೀಡಿದ್ದಾರೆ. ಹಲವು ಕನ್ನಡ ಪರ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ.
ಬೆಂಗಳೂರಿನಲ್ಲಿ ಬಂದ್ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೆಟ್ರೋ ರೈಲು ಎಂದಿನಂತೆ ಸಂಚರಿಸುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಪ್ರತಿಭಟನೆ ಜೋರಾಗಿದೆ