10:12 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4…

ಇತ್ತೀಚಿನ ಸುದ್ದಿ

ಮಾಸ್ ನಿಂದ ಕೇಡರ್ ಆಧಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುತ್ತೇವೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

January 6, 2021, 5:57 PM

ಬಂಟ್ವಾಳ(reporterkarnataka news):

ದಕ್ಷಿಣ ಕನ್ನಡ ಜಿಲ್ಲೆ ಈ ದೇಶಕ್ಕೆ ಸಂಸ್ಕೃತಿ ಕೊಟ್ಟ ಪವಿತ್ರ ಭೂಮಿ. ಪಕ್ಷವನ್ನು ಮಾಸ್ ಬೇಸ್ ನಿಂದ ಕೇಡರ್ ಬೇಸ್ ಪಕ್ಷವಾಗಿ ಪರಿವರ್ತಿಸುವ ಕಾರ್ಯ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಬಂಟ್ವಾಳದಲ್ಲಿ ಬುಧವಾರ ನಡೆದ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ಹಾಗೂ ಸಂಕಲ್ಪ ಸಭೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ವಿದ್ಯಾದಾನ, ಆರ್ಥಿಕ ಶಕ್ತಿ ಕೊಟ್ಟ ಭೂಮಿ. ಈ ಭೂಮಿಯನ್ನು ಈಗ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಈ ಭೂಮಿಯಲ್ಲಿ ಮತದಾರರು ಯಾರಿಗೆ ಬೆಂಬಲ ನೀಡುತ್ತಾರೋ ಅವರ ಸರ್ಕಾರ ಬಂದಿರೋದನ್ನು ನಾವು ಇತಿಹಾಸದಲ್ಲಿ ನೋಡಿದ್ದೇವೆ. ಈ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದರೂ ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಇಲ್ಲಿಗೆ ಬಂದಿದ್ದೇನೆ. ಕಾರ್ಯಕರ್ತರ ಧ್ವನಿ ಅಧ್ಯಕ್ಷರ ಧ್ವನಿಯಾಗಿಪಕ್ಷವನ್ನು ಮಾಸ್ ಬೇಸ್ ನಿಂದ ಕೇಡರ್ ಬೇಸ್ ಆಗಿ ಪರಿವರ್ತಿಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು