ಇತ್ತೀಚಿನ ಸುದ್ದಿ
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ, ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ – ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಅವಕಾಶ
December 4, 2020, 9:09 PM

ಮಂಗಳೂರು (reporterkarnataka news): ಕೊವೀಡ್-19 ಲಾಕ್ಡೌನ್ನಿಂದಾಗಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ ಕದ್ರಿ ಜಿಂಕೆ ಉದ್ಯಾವನದ ಲೇಸರ್ ಶೋ, ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಮತ್ತೆ ಅವಕಾಶ ಮಾಡಿಕೊಡಲಾಗಿದೆ. ಇದೀಗ ಡಿಸೆಂಬರ್ ತಿಂಗಳ ಶನಿವಾರ ಮತ್ತು ಭಾನುವಾರ ಮಾತ್ರ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ತಾತ್ಕಾಲಿಕವಾಗಿ ಅವಕಾಶ ಕಲ್ಪಿಸಲಾಗಿದೆ.
ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.