8:12 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಈ ಐಪಿಎಲ್‌ನಲ್ಲಿ ಇಲ್ಲ ಸ್ಟಾರ್ ಆ್ಯಂಕರ್ ಮಯಂತಿ ಲ್ಯಾಂಗರ್ ಬಿನ್ನಿ

September 18, 2020, 8:56 PM

ಬೆಂಗಳೂರು (Reporter Karnataka News)

ಸ್ಟಾರ್ ನಿರೂಪಕಿ ಮಯಂತಿ ಲ್ಯಾಂಗರ್ ಈ ಭಾರಿಯ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಟೂರ್ನಿಯ ಪ್ರಸಾರ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಸೆ.19 ರಿಂದ ನ.10ರವರೆಗೆ ಐಪಿಎಲ್ ಟೂರ್ನಿ ನಡೆಯಲಿದೆ.

ಮಯಂತಿ ಅವರೂ ಟ್ವೀಟ್ ಮಾಡಿದ್ದು, ಆರು ವಾರಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಬಾರಿಯ ಐಪಿಎಲ್‌ನಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಹಾಗೂ ಮಯಂತಿ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಬಿನ್ನಿ- ಮಯಂತಿ ದಂಪತಿ ಮಗುವಿನ ಫೋಟೋ ಸಮೇತ ಟ್ವೀಟ್ ಮಾಡಿದ್ದಾರೆ.

https://twitter.com/MayantiLanger_B/status/1306913538561077251?s=19


ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಈಗಾಗಲೇ ಪೂರ್ಣ ಪ್ರಮಾಣದ ಆಯಂಕರ್‌ಗಳ ತಂಡವನ್ನು ಪ್ರಕಟಿಸಿದೆ. ಸುರೆನ್ ಸುಂದರಮ್, ಕಿರಾ ನಾರಾಯಣನ್, ಸುಹೈಲ್ ಚಂದೋಕ್, ನಶ್‌ಪ್ರೀತ್ ಕೌರ್, ಸಂಜನಾ ಗಣೇಶನ್, ಜತಿನ್ ಸಪ್ರು, ತನ್ಯಾಪುರೂಹಿತ್, ಅನಂತ್ ತ್ಯಾಗಿ, ಧೀರಜ್ ಜುನೇಜಾ, ಭಾವ್ನಾ ಬಾಲಕೃಷ್ಣನ್ (ತಮಿಳು), ರೀನಾ ಡಿ ಸೋಜಾ, ಮಧು ಮೈಲಾಂಕೊಡಿ (ಕನ್ನಡ), ನೆಹಾ ಮಾಟ್ಚಾ (ತೆಲುಗು), ಅಂಜುಂ ಚೋಪ್ರಾ, ಲಿಸಾ ಸ್ಟೇಲೆಕರ್ ಹಾಗೂ ನೆರೊಲಿ ಮೆಡೋಸ್ ಟೂರ್ನಿಯಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು