2:49 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

ಒಂದು ಫ್ಲೈ ಓವರ್ ಮಾಡಲು ಹತ್ತು ವರ್ಷ ತಗೊಂಡ ಆಯೋಗ್ಯ ಸಂಸದರಿಂದ ಏನೂ ನಿರೀಕ್ಷಿಸುವ ಹಾಗಿಲ್ಲ : ಮಿಥುನ್ ರೈ

September 9, 2020, 8:29 AM

ಮಂಗಳೂರು(reporter Karnataka News)

ನಮ್ಮ ಸಂಸದರಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಒಂದು ಫ್ಲೈ ಓವರ್ ಮಾಡಲು ಹತ್ತು ವರ್ಷ ತಗೊಂಡಂತಹ ಅಯೋಗ್ಯ ಸಂಸದ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಟೀಕಿಸಿದ್ದಾರೆ.

ಮಂಗಳೂರಿನ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಿನಿವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಹತ್ತು ವರ್ಷದಲ್ಲಿ ಮಾಡಿದ ಆ ಫ್ಲೈ ಓವರ್ ಬಿರುಕು ಬಂದಿದೆ. ಅದನ್ನು ಭಗವಂತನೇ ಉಳಿಸಬೇಕಿದೆ ಎಂದರು.
ಬಿಜೆಪಿ ಸರಕಾರ ಎಲ್ಲವನ್ನೂ ಖಾಸಗಿ ಸಂಸ್ಥೆಗಳಿಗೆ ಮಾರುತ್ತಾ ದೇಶವನ್ನೇ ಮಾರಲು ಹೊರಟಿದೆ. ಬ್ಯಾಂಕ್‌‌ಗಳ ವಿಲೀನ, ಏರ್ಪೋರ್ಟ್‌ಗಳ ಖಾಸಗೀಕರಣ ಮುಂತಾದ ಕ್ರಮಗಳ ಮೂಲಕ ಜನರ ಹಕ್ಕನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಬದಲಾಗಿ ಅಧಿಕಾರಿಗಳ ವರ್ಗಾವಣೆ ಮಾತ್ರ ನಡೆಯುತ್ತಿದೆ. ಹೊಸ ಯೋಜನೆಗಳನ್ನು ತರುವ ಕೆಲಸ ಆಗುತ್ತಿಲ್ಲ ಮಾತ್ರವಲ್ಲ ಹಿಂದಿನ ಯೋಜನೆಗಳ ಸಮರ್ಪಕ ನಿರ್ವಹಣೆಯೂ ನಡೆಯುತ್ತಿಲ್ಲ.ಸ್ಮಾರ್ಟ್ ಸಿಟಿ ಕೆಲಸಗಳೂ ನಾಮ್‌ ಕೆ ವಾಸ್ತೆ ಆಗಿದೆ. ಭಾವನಾತ್ಮಕ ವಿಚಾರಗಳಿಂದ ಜನರನ್ನು ಮಂತ್ರ ಮುಗ್ಧರಾಗಿಸುವ ಕೆಲಸ ಮಾತ್ರ ಬಿಜೆಪಿಯಿಂದ ಆಗುತ್ತಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು