6:50 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಮಿಥುನ್ ನನ್ನ ಆಪ್ತ, ಮಂಗಳೂರಿನಲ್ಲಿ ಅವರಿಗೆ ಹೆಚ್ಚಿನ ಜವಾಬ್ದಾರಿಯಿದೆ: ಡಿ.ಕೆ. ಶಿವಕುಮಾರ್

January 10, 2021, 7:38 PM

ಬೆಂಗಳೂರು(reporterkarnataka news):

ಮಿಥುನ್ ರೈ ನನ್ನ ಆಪ್ತ. ಮಂಗಳೂರಿನಲ್ಲಿ ಮಿಥುನ್ ಗೆ ಹೆಚ್ಚಿನ ಜವಾಬ್ದಾರಿ ಇದೆ. ಲೋಕಸಭೆ ಚುನಾವಣೆಗೆ  ಅವರು ಸ್ಪರ್ಧಿಸಿದ್ದರು. ನಾನೇ ಅವರಿಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ಕೊಟ್ಟೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ನನ್ನ ಹೆಸರಿಂದ ಒಬ್ಬರಿಗೆ ಅನುಕೂಲವಾಗಿ ಮತ್ತೊಬ್ಬರಿಗೆ ಹಿನ್ನಡೆಯಾಗುವುದು ಬೇಡ ಎಂದು ನಾನು ಅವರಿಗೆ ಸ್ಪರ್ಧೆಯಿಂದ ಹಿಂದೆ ಸರಿಯಲು

ಸಲಹೆ ನೀಡಿದೆ ಎಂದು ಮಾಧ್ಯಮ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು ನುಡಿದರು.

ಯುವ ಕಾಂಗ್ರೆಸ್ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತವಾಗಿ ನಡೆಯಬೇಕು. ಪಕ್ಷದ ಅಧ್ಯಕ್ಷನಾಗಿ ನಾನು ಯಾರ ಪರವಾಗಿ ನಿಲ್ಲುವುದಿಲ್ಲ. ಯಾರಿಗೂ ವಿರೋಧ ಮಾಡುವುದಿಲ್ಲ.‌ ಯಾರಿಗೆ ಆಸಕ್ತಿ ಇದೆಯೋ, ಯಾರು ಪಕ್ಷಕ್ಕೆ ಸಮಯ ಕೊಟ್ಟು ಸಂಘಟನೆಗೆ ಶ್ರಮಿಸುತ್ತಾರೋ ಅಂತಹವರನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮತದಾರರಿಗೆ ಮನವಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು