3:07 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ವೆಚ್ಚ ಬರೋಬ್ಬರಿ 3 ಸಾವಿರ ಕೋಟಿ !

January 5, 2021, 8:22 AM

ಮಂಗಳೂರು(reporterkarnataka news): ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಯೋಜನೆಯು 3000 ಕೋಟಿ ರೂ. ವೆಚ್ಚದ್ದಾಗಿದೆ. ಕೊಳವೆ ಮಾರ್ಗವು 450 ಕಿಮೀ. ಉದ್ದ ಹೊಂದಿದೆ.

ಈ ಕೊಳವೆ ಮಾರ್ಗವನ್ನು ಜಿಎಐ.ಎಲ್ (ಇಂಡಿಯಾ) ಲಿ., ನಿರ್ಮಿಸಿದೆ. ಇದು ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೇರಳದ ಕೊಚ್ಚಿಯ ಧ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ)  ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಸ್ಸೂರ್, ಪಾಲಕ್ಕಾಡ್, ಮಲ್ಲಪುರಂ, ಕೋಳಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಹಾದೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ. ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದ್ದು, ಅದರ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು. ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು. ಇದನ್ನು ಅಡ್ಡಡ್ಡ ಕೊರೆಯುವ ವಿಧಾನದ ವಿಶೇಷ ತಂತ್ರಜ್ಞಾನದ ಮೂಲಕ ಮಾಡಲಾಯಿತು.

ಈ ಕೊಳವೆ ಮಾರ್ಗ ಪರಿಸರ ಸ್ನೇಹಿ ಮತ್ತು ಕೈಗೆಟಕುವ ದರದ ಇಂಧನವನ್ನು ಕೊಳವೆ ಮಾರ್ಗದ ನೈಸರ್ಗಿಕ ಅನಿಲ (ಪಿ.ಎನ್.ಜಿ.)ರೂಪದಲ್ಲಿ ಮನೆಗಳಿಗೆ ಪೂರೈಸಲಿದೆ ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ.)ಯನ್ನು ಸಾರಿಗೆ ವಲಯಕ್ಕೆ ಸರಬರಾಜು ಮಾಡಲಿದೆ. ಇದು ನೈಸರ್ಗಿಕ ಅನಿಲವನ್ನು ಜಿಲ್ಲೆಯಾದ್ಯಂತದ ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳಿಗೆ ಕೊಳವೆ ಮಾರ್ಗದಲ್ಲಿ ಪೂರೈಸಲಿದೆ. ಶುದ್ಧ ಇಂಧನದ ಬಳಕೆಯು ವಾಯು ಮಾಲಿನ್ಯವನ್ನು ನಿಗ್ರಹಿಸಿ, ವಾಯು ಗುಣಮಟ್ಟವನ್ನು ಸುಧಾರಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು