ಇತ್ತೀಚಿನ ಸುದ್ದಿ
ಬಿಹಾರದಲ್ಲಿ ಇಂದು ಪ್ರಧಾನಿ ಮೋದಿ ಚುನಾವಣಾ ಪ್ರಚಾರ
October 28, 2020, 7:36 AM

ಪಾಟ್ನ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮೂರು ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ದರ್ಭಾಂಗ್, ಮುಜಾಫರ್ ಪುರ್ ಮತ್ತು ಪಾಟ್ನದಲ್ಲಿ ಪ್ರಧಾನಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರಧಾನಿ ತಮ್ಮ ಭಾಷಣದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುತ್ತಿದ್ದಾರೆ.