ಇತ್ತೀಚಿನ ಸುದ್ದಿ
ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್ ಶಾ ಶ್ಲಾಘನೆ
January 17, 2021, 10:11 PM

ಬೆಳಗಾವಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಜೋಡಿಗೆ ಕರ್ನಾಟಕದ ಜನ ಆಶೀರ್ವದಿಸಿದ್ದಾರೆ. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೂ ಜಯಭೇರಿ ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾನುವಾರ ಮಾತನಾಡಿದ ಅವರು, ಕರ್ನಾಟಕದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಾಣವಾಗಿದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ವಿಜಯದ ಈ ಮಾದರಿ ಮುಂದುವರಿಯಬೇಕು ಎಂದರು.