ಇತ್ತೀಚಿನ ಸುದ್ದಿ
ಕೊರೊನಾ ಮಹಾಮಾರಿ: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಚರ್ಚೆ
August 11, 2020, 7:46 AM

ನವದೆಹಲಿ(reporterkarnataka news):
ದೇಶದಲ್ಲಿ ಕೊರೊನಾ ನಿಯಂತ್ರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ 10 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಎಲ್ಲ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಕೊರೊನಾ ವ್ಯಾಪಕವಾಗಿ ಹರಡಿರುವ 10 ರಾಜ್ಯಗಳಲ್ಲಿ ರೋಗ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಧಾನಿ ಚರ್ಚೆ ನಡೆಸಿದ್ದಾರೆ..
ರಾಜ್ಯದ ಪರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ , ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಮತ್ತು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದರು. ರಾಜ್ಯದ ಪರಿಸ್ಥಿತಿ ಕುರಿತು ಸಮಗ್ರ ಮಾಹಿತಿ ನೀಡಿದರು