ಇತ್ತೀಚಿನ ಸುದ್ದಿ
ಮುಚ್ಚೂರು-ಕಾನದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿದ ಶಾಸಕ ಡಾ.ಭರತ್ ಶೆಟ್ಟಿ
November 23, 2020, 6:32 PM

ಸುರತ್ಕಲ್(reporterkarnataka news):
ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಹಾಗೂ ಲಯನ್ಸ್ ಕ್ಲಬ್ ಮುಚ್ಚೂರು- ನೀರುಡೆ ಸಹಭಾಗಿತ್ವದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಕಾರದೊಂದಿಗೆ ಮುಚ್ಚೂರು ಕಾನದಲ್ಲಿರುವ ಶ್ರೀ ರಾಮ ಯುವಕ ಸಂಘದ ಕಟ್ಟಡದಲ್ಲಿ ಭಾನುವಾರ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಇಂತಹ ಮಾನವೀಯ ಕಾರ್ಯ ಮಾಡುತ್ತಿರುವ ಸಂಘಟನೆಯ ಸದಸ್ಯರಿಗೆ ಶಾಸಕರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್.ಸಿ.ಸಿ ವಿದ್ಯಾರ್ಥಿಗಳು ರಕ್ತ ದಾನ ಮಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಶ್ರೀ ರಾಮ ಯುವಕ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ನೀರುಡೆ- ಮುಚ್ಚೂರು ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.