3:55 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ

12/08/2021, 08:32

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಈ ಮಧ್ಯೆ ವೆನ್ಲಾಕ್ ನಲ್ಲಿ 36 ಬೆಡ್ ನ ಐಸಿಯು ವಿಭಾಗವನ್ನು ಉದ್ಘಾಟಿಸುವರು. ಉರ್ವ ಸಮೀಪದ ಅಂಬೇಡ್ಕರ್ ಭವನವನ್ನು ಕೂಡ ಉದ್ಘಾಟಿಸುವ ಕಾರ್ಯಕ್ರಮವಿದೆ.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು