ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಬಿಎಸ್ ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
December 23, 2020, 7:38 PM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ವಿರುದ್ಧ ದಾಖಲಾಗಿರುವ ಭ್ರಷ್ಟಾರದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಮನವಿಯನ್ನು ರಾಜ್ಯ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಇದರೊಂದಿಗೆ ಸಿಎಂ ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ.
ಬೆಂಗಳೂರಿನ ಬೆಳ್ಳಂದೂರು ಪ್ರದೇಶದಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ಮಾಡಲಾಗಿದೆ ಎಂಬ ಆರೋಪದ ಮೇಲೆ ಯಡಿಯೂರಪ್ಪನವರ ವಿರುದ್ಧ 2015ರಲ್ಲಿ ಪ್ರಕರಣ ದಾಖಲಾಗಿತ್ತು.
2013 ರಲ್ಲಿ ಆರ್ಟಿಐ ಕಾರ್ಯಕರ್ತರಾದ ವಾಸುದೇವ್ ರೆಡ್ಡಿ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ 2015 ರ ಫೆಬ್ರವರಿಯಲ್ಲಿ ಪ್ರಕರಣ ದಾಖಲಾಗಿತ್ತು. 2019 ರಲ್ಲಿ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.