ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಯಡಿಯೂರಪ್ಪ ಗೆ ಬಿಜೆಪಿ ಹೈಕಮಾಂಡ್ ನಿಂದ ದಿಲ್ಲಿಗೆ ಬುಲಾವ್ : ಆಗುತ್ತಾ ಸಂಪುಟ ವಿಸ್ತರಣೆ?
January 9, 2021, 10:58 PM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಲ್ಲಿಗೆ ಬಿಜೆಪಿ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆಗೆ ಈ ಬುಲಾವ್ ಎಂದು ವ್ಯಾಖ್ಯಾನಿಸಲಾಗಿದೆ.
ಮುಖ್ಯಮಂತ್ರಿ ನಾಳೆ ಬೆಳಗ್ಗೆ 8.20ರ ವಿಮಾನದಲ್ಲಿ ದಿಲ್ಲಿಗೆ ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ರಾಜ್ಯ ಸಚಿವ ಸಂಪುಟ ಸಂಕ್ರಾಂತಿ ವೇಳೆಗೆ ವಿಸ್ತರಣೆಯಾಗಲಿದ್ದು, 8 ಮಂದಿಯನ್ನು ಸಂಪುಟಕ್ಕೆ ಸೇರಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.