ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಬಿ ಎಲ್ ಸಂತೋಷ್ ಮಹತ್ವದ ಚರ್ಚೆ
August 22, 2020, 6:55 AM

ಬೆಂಗಳೂರು(reporterkarnataka news): ಬಿಜೆಪಿ ಹಿರಿಯ ನಾಯಕ ಬಿ ಎಲ್ ಸಂತೋಷ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಚಿವ ರಮೇಶ್ ಜಾರಕಿ ಹೊಳಿ ಮತ್ತು ತಂಡದ ಇತರ ಸದಸ್ಯರ ಇತ್ತೀಚೆಗಿನ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಈ ಮಾತುಕತೆ ಮಹತ್ವ ಪಡೆದಿದೆ.
ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಲು ಮತ್ತು ಹಬ್ಬದ ಶುಭಾಶಯ ಕೋರಲು ಭೇಟಿ ಮಾಡಿದ್ದೇನೆ ಎಂದು ಸಂತೋಷ್ ಹೇಳಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಂತೋಷ್ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವು ಸಚಿವರ ಜತೆ ಕೂಡ ಮಾತುಕತೆ ನಡೆಸಿದ್ದರು.
ಕೊರೋನಾ ನಿಯಂತ್ರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕೂಡ ಚರ್ಚೆ ನಡೆಸಿದ್ದರು. ಇದರಿಂದಾಗಿ ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನಾರಚನೆ ಸೇರಿದಂತೆ ಹಲವು ಮಹತ್ವದ ಬೆಳವಣಿಗೆಗಳು ಸಂಭವಿಸಲಿದೆ ಎಂದು ವಿಶ್ಲೇಷಿಸಲಾಗಿದೆ.