ಇತ್ತೀಚಿನ ಸುದ್ದಿ
ಮಹಾರಾಷ್ಟ್ರದಲ್ಲಿ ಒಂದೇ ದಿನ 12, 608 ಮಂದಿಗೆ ಕೊರೊನಾ ಸೋಂಕು
August 15, 2020, 5:12 AM

ಮುಂಬೈ(reporterkarnataka news): ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾದ ರಣಕೇಕೆ ಮುಂದುವರಿದೆ. ಶುಕ್ರವಾರ ದಾಖಲೆ ಸಂಖ್ಯೆಯ ಕೊರೊನಾ ಪ್ರಕರಣ ವರದಿಯಾಗಿದೆ. 12, 608 ಮಂದಿ ಹೊಸದಾಗಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5, 12, 734ಕ್ಕೆ ತಲುಪಿದೆ.
ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮಹಾರಾಷ್ಟ್ರ ಈಗಲೂ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿ ಕೊರೊನಾದಿಂದ ಒಂದೇ ದಿನ 364 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ ಮಹಾರಾಷ್ಟ್ರದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 19, 427ಕ್ಕೆ ತಲುಪಿದೆ.