ಇತ್ತೀಚಿನ ಸುದ್ದಿ
ಮುಂದಿನ 15 ದಿನದೊಳಗೆ ಎಲ್ಲ ಸಿಟಿ ಬಸ್ ಗಳಿಗೆ ಜಿಪಿಎಸ್ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ
December 5, 2020, 5:37 PM

ಮಂಗಳೂರು(reporterkarnata news): ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಿಟಿ ಬಸ್ ಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿದೆ. ಮುಂದಿನ 15 ದಿನಗಳಲ್ಲಿ ಜಿಪಿಎಸ್ ಅಳವಡಿಸದಿದ್ದರೆ ಅಂತಹ ಬಸ್ ಗಳ ಪರವಾನಿಗೆ ರದ್ದುಪಡಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಎಚ್ಚರಿಕೆ ನೀಡಿದರು.
ಮಂಗಳೂರು ನಗರ ವ್ಯಾಪ್ತಿಯ ಲ್ಲಿ ಸಂಚರಿಸುವ 320 ಬಸ್ ಗಳ ಪೈಕಿ 70 ಬಸ್ ಗಳಿಗೆ ಮಾತ್ರ ಇದುವರೆಗೆ ಜಿಪಿಎಸ್ ಅಳವಡಿಸಲಾಗಿದೆ. ಮುಂದಿನ 15 ದಿನಗಳೊಳಗೆ ಎಲ್ಲ ಬಸ್ ಗಳಿಗೂ ಜಿಪಿಎಸ್ ಅಳವಡಿಸಬೇಕೆಂದು ಅವರು ಸೂಚನೆ ನೀಡಿದರು.
ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಮಂಗಳೂರು ಆರ್ ಟಿಒ ವರ್ಣೇಕರ್ ಮುಂತಾದವರು ಉಪಸ್ಥಿತರಿದ್ದರು.