ಇತ್ತೀಚಿನ ಸುದ್ದಿ
ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ: ತನಿಖೆಗೆ ಸರಕಾರ ಆದೇಶ
August 21, 2020, 5:21 AM

ಮೈಸೂರು(reporterkarnataka news): ನಂಜನಗೂಡು ತಾಲೂಕಿನ ವೈದ್ಯಾಧಿಕಾರಿ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ಕುರಿತು ತನಿಖೆಗೆ ಸರ್ಕಾರ ಆದೇಶ ನೀಡಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಮಾಹಿತಿ ನೀಡಿದ್ದಾರೆ. ಹಿರಿಯ ವೈದ್ಯರಿಂದ ಸಹಕಾರ ದೊರೆಯದ ಕಾರಣ ಕೆಲಸ ಒತ್ತಡದಿಂದಾಗಿ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ..
ಐಎಎಸ್ ಅಧಿಕಾರಿಯೊಬ್ಬರು ನಾಗೇಂದ್ರ ಅವರ ಮೇಲೆ ನಿರಂತರ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಸರ್ಕಾರ ನಾಗೇಂದ್ರ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ