6:40 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ನಳಿನ್ ಕುಮಾರ್ ಕಟೀಲ್ ನಕಲಿ ಶ್ಯಾಮ ಎಂದು ಟೀಕಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 

August 21, 2020, 6:17 PM

ಬೆಂಗಳೂರು(reporterkarnataka news): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ವಾಗ್ವಾದ ಮುಂದುವರಿದಿದೆ. ನಳಿನ್ ಮಾಡಿರುವ ಟೀಕೆಗೆ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಖಡಕ್ ಉತ್ತರ ನೀಡಿದ್ದಾರೆ.

ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ಧಿಕ ದಾರಿದ್ರ್ಯ ಇದ್ದಿರಬಹುದು ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ನಳಿನ್ ಅವರ ಟೀಕೆಗೆ ಮಾಜಿ ಮುಖ್ಯಮಂತ್ರಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.

ಹಿಂದೂ ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ?  ಬಾಳಿಗ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ?  ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು