10:03 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ಬಿಜೆಪಿ ನಾಯಕರಿಗೆ ಇರಿಸುಮುರಿಸು ಉಂಟು ಮಾಡಿದ ವಿಶ್ವನಾಥ್ ಹೇಳಿಕೆ: ರಾಜ್ಯಾಧ್ಯಕ್ಷ ನಳಿನ್ ಸ್ಪಷ್ಟನೆ

August 27, 2020, 8:53 AM

ಕಲಬುರ್ಗಿ(reporterkarnataka news): ಟಿಪ್ಪು ಸುಲ್ತಾನ್ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ನಿನ್ನೆ ಪಕ್ಷದ ನಾಯಕ ಎಚ್. ವಿಶ್ವನಾಥ್ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕವಾದದ್ದು. ಪಕ್ಷಕ್ಕೂ ವಿಶ್ವನಾಥ ಅವರ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ. ಟಿಪ್ಪು ವಿಷಯದಲ್ಲಿ ಪಕ್ಷ ಸ್ಪಷ್ಟ ನಿಲುವು ಹೊಂದಿದೆ ಎಂದು ನಳಿನ್ ನುಡಿದರು.

ಜೆಡಿಎಸ್ ನಿಂದ ಬಿಜೆಪಿಗೆ ವಲಸೆ ಬಂದಿರುವ ಹಿರಿಯ ರಾಜಕಾರಣಿ ಹಾಗೂ ಶಾಸಕ ಎಚ್. ವಿಶ್ವನಾಥ್ ಟಿಪ್ಪುವನ್ನು ಬುಧವಾರ ಹಾಡಿ ಹೊಗಳಿದ್ದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಟಿಪ್ಪು ಈ ಮಣ್ಣಿನ ಮಗ ಎಂದು ಪ್ರಶಂಸೆಗಳ ಸುರಿ ಮಳೆ ಗೈದಿದ್ದರು.

ಮಕ್ಕಳು ಗಾಂಧೀಜಿಯಿಂದ ಹಿಡಿದು ಟಿಪ್ಪುವಿನ ತನಕ ತಿಳಿದಿರಬೇಕು ಎಂದು ವಿಶ್ವನಾಥ್ ಅಭಿಪ್ರಾಯಪಟ್ಟಿದ್ದರು. ಇದು ಬಿಜೆಪಿಗೆ ಇರಿಸುಮುರಿಸು ಉಂಟು ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು