9:40 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ನಳಿನ್ ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದ ಪೋಕರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

October 22, 2020, 1:17 PM

ಬೆಂಗಳೂರು(reporterkarnataka news):

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್‌ ಕುಮಾರ್‌ ಕಟೀಲ್‌ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಉಪಚುನಾವಣೆ ಬಳಿಕ ಬಂಡೆ ಛಿದ್ರ, ಹುಲಿಯಾ ಕಾಡಿಗೆ’ ಎಂದು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಡಿರುವ ಟೀಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ನಳಿನ್ ವಿರುದ್ಧ  ಸರಣಿ ಟ್ವೀಟ್‌ ಮಾಡುವ ಮೂಲಕಸಿದ್ದರಾಮಯ್ಯ ಬಿಜೆಪಿ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ’ ಎಂದು ಹೇಳಿಕೊಂಡು ತಿರುಗಾಡುತ್ತಿರುವ ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ವ್ಯಕ್ತಿ. ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಇವರನ್ನು ಕಾಡಿಗೆ ಕೊಂಡುಹೋಗಿ ಬಿಟ್ಟು ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ನಳಿನ್‌ ಕುಮಾರ್‌ ಕಟೀಲ್‌ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ ಎಂದು ಸಿಡಿಮಿಡಿಗೊಂಡಿದ್ದಾರೆ.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್‌ ಕುಮಾರ್ ಕಟೀಲ್‌ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು