7:58 PM Thursday21 - January 2021
ಬ್ರೇಕಿಂಗ್ ನ್ಯೂಸ್
ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ…

ಇತ್ತೀಚಿನ ಸುದ್ದಿ

ನಂದಾವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಅರವಿಂದ್ ಭಟ್ ಆಲಾಡಿ 

December 20, 2020, 8:29 AM

ಬಂಟ್ವಾಳ(reporterkarnataka news):

ಸಜೀಪ ಮಾಗಣೆಯ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ 

ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಅರವಿಂದ್ ಭಟ್ ಆಲಾಡಿ ಆಯ್ಕೆಯಾಗಿದ್ದಾರೆ.

ನೂತನ ವ್ಯವಸ್ಥಾಪನಾ ಸಮಿತಿಯನ್ನು ಕ್ಷೇತ್ರದ ಆಡಳಿತಾಧಿಕಾರಿ ತಾರಾನಾಥ್ ಸಾಲ್ಯಾನ್ ಮತ್ತು ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶದಂತೆ ರಚಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅರವಿಂದ್ ಭಟ್ ಆಲಾಡಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಮಹೇಶ್ ಭಟ್, ಯಶವಂತ ದೇರಾಜೆ, ಅರುಣ್ ಕುಮಾರ್ ಕುಕ್ಕುದಕಟ್ಟೆ, ಮೋಹನ್ ದಾಸ್ ಹೆಗ್ಡೆ ನಗ್ರಿ, ದೇವಪ್ಪ ನಾಯ್ಕ ದಾಸರಗುಡ್ಡೆ, ಜಯಶ್ರೀ ಅಶೋಕ್ ಗಟ್ಟಿ ನಂದಾವರ, ಕವಿತಾ ವಸಂತ ಪೆರಾಜೆ ಸಜೀಪ ನಡು, ಗಣೇಶ್ ಕಾರಾಜೆ ಅವರುಗಳು ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರುಗಳಾಗಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದ ಈ ಹಿಂದಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದ ಎ.ಸಿ ಭಂಡಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಹೋರಾಟಗಾರ ಮತ್ತು ಮಾಗಣೆಯ ತಂತ್ರಿಗಳಾದ ಸುಬ್ರಹ್ಮಣ್ಯ ಭಟ್ ಮಂಜಿನಡ್ಕ ಅವರನ್ನು ನೂತನ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು