6:53 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ನಟಿ ರಾಗಿಣಿ ಬಂಧನ ತಪ್ಪಿಸಲು ಪ್ರಭಾವಿಗಳಿಂದ ನಡೆದಿತ್ತೇ ಭಾರಿ ಲಾಬಿ? 

September 5, 2020, 1:37 PM

ಬೆಂಗಳೂರು(reporterkarnataka news): ಡ್ರಗ್ಸ್ ಕುರಿತಂತೆ ಚಲನಚಿತ್ರ ನಟಿ ರಾಗಿಣಿ ದ್ವಿವೇದಿ ಬಂಧನ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿದ್ದು, ಪೇಜ್ 3 ಪಾರ್ಟಿಗೆ ಬರುವ ಪ್ರಭಾವಿಗಳ ಮಕ್ಕಳ ಹೆಸರು ಬಹಿರಂಗವಾಗುವುದನ್ನು ತಡೆಯುವ ನಿಟ್ಟಿನಲ್ಲಿ ರಾಗಿಣಿ ಬಂಧನವನ್ನು ತಪ್ಪಿಸಲು ಸಾಕಷ್ಟು ಪ್ರಯತ್ನಗಳು ನಡೆದಿತ್ತು ಎನ್ನುವ ಅಂಶ ಬೆಳಕಿಗೆ ಬಂದಿದೆ.

ರಾಗಿಣಿ ಬಂಧನದ ಬಳಿಕ ಸಿಸಿಬಿ ವಿಚಾರಣೆ ವೇಳೆ ಸಾಕಷ್ಟು ವಿಚಾರಗಳು ಹೊರಬೀಳುವ ಸಾಧ್ಯತೆಗಳಿವೆ. ತನ್ನ ಬಂಧನದಿಂದ ಆಕ್ರೋಶಗೊಂಡಿರುವ ರಾಗಿಣಿ ಅವರು ಸಿಸಿಬಿ ಮುಂದೆ ಸಹಜವಾಗಿಯೇ ಎಲ್ಲ ವಿಚಾರಗಳನ್ನು ಬಹಿರಂಗಗೊಳಿಸುವ ಸಾಧ್ಯತೆಗಳಿವೆ. ಇದರಿಂದ ಪೇಜ್ 3 ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದವರ ಹೆಸರು ಬಹಿರಂಗಗೊಳ್ಳಲಿದೆ. ರಾಜಕಾರಣಿಗಳ, ಅಧಿಕಾರಿಗಳ ಹಾಗೂ ಪ್ರಭಾವಿ ವ್ಯಕ್ತಿಗಳ ಮಕ್ಕಳು ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಪ್ರಭಾವಿಗಳ ತಂಡವೊಂದು ರಾಗಿಣಿ ಬಂಧನವಾಗುವುದನ್ನು ತಪ್ಪಿಸಲು ಸಾಕಷ್ಟು ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು