ಇತ್ತೀಚಿನ ಸುದ್ದಿ
ಎನ್ ಡಿಎ ಮೈತ್ರಿಕೂಟ ಸೇರುವುದು ಅಪ್ಪಟ ಸುಳ್ಳು:ಕೊನೆಗೂ ಬಾಯಿಬಿಟ್ಟ ಕುಮಾರಸ್ಚಾಮಿ
January 3, 2021, 10:09 PM

ಬೆಂಗಳೂರು(reporterkarnataka news):
ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಲಿದೆ ಎಂಬ ಕಲ್ಪಿತ ಸುದ್ದಿಯನ್ನು ವ್ಯವಸ್ಥಿತವಾಗಿ ಹಬ್ಬಿಸಲಾಗುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೊನೆಗೂ ಮೌನ ಮುರಿದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಅನ್ನು ಮುಗಿಸುವ ಬಿಜೆಪಿ ಪ್ರಯತ್ನಗಳೆಲ್ಲ ವಿಫಲವಾಗಿದೆ. ಪಂಚಾಯಿತಿ ಚುನಾವಣೆ ಫಲಿತಾಂಶ ಬಿಜೆಪಿಗೆ ಮನವರಿಕೆ ಮಾಡಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ ನಾವು, ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ನಾಯಕರಿಗಿಂತಲೂ ಪ್ರಧಾನಿ ಜತೆ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿ
ಎಂದು ಅವರು ಎಚ್ಚರಿಸಿದ್ದಾರೆ.