11:07 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ನೆನಪಿಡಿ, ಹೊಸ ವರ್ಷಕ್ಕೆ ಸಾರ್ವಜನಿಕರಿಗಿಲ್ಲ ಬೀಚ್ ಪ್ರವೇಶ:  ಕೋವಿಡ್ ನಿಯಂತ್ರಣಕ್ಕೆ ಇದು ಜಿಲ್ಲಾಧಿಕಾರಿ ಆದೇಶ

December 30, 2020, 8:50 AM

ಮಂಗಳೂರು (reporterkarnataka news)): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ವರ್ಷದಲ್ಲಿ ಸಾರ್ವಜನಿಕರಿಗೆ ಬೀಚ್ ಪ್ರವೇಶ ನಿಷೇಧಿಸಲಾಗಿದೆ.

ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್‍ಡಮ್‍ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ SARS-COV 2 ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ ಹರಡಿ ಬೆಳವಣಿಗೆ ಹೊಂದುತ್ತಿದೆ. ಅಲ್ಲದೇ ಯುನೈಟೆಡ್ ಕಿಂಗ್‍ಡಮ್‍ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ. 

ಈ ಹಿನ್ನೆಲೆಯಲ್ಲಿ SARS-COV2 ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ/ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ  2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು

ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ  ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು