3:36 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ನ್ಯೂ ಇಯರ್ ಸಂಭ್ರಮಾಚರಣೆಗೆ ಬ್ರೇಕ್:ಹೊಸ ವರ್ಷಕ್ಕೆ ನಿಷೇಧಾಜ್ಞೆಯ ಸ್ವಾಗತ

December 31, 2020, 9:28 AM

ಮಂಗಳೂರು(reporterkarnataka news): ಇಂದು 2020 ಇಸವಿಯ ಕೊನೆಯ ದಿನ. ಕೊರೊನಾ ಕಾರಣಕ್ಕೆ ಇಡೀ ಪ್ರಪಂಚವೇ ಸಾಕಷ್ಟು ಕಷ್ಟ, ನೋವು ಅನುಭವಿಸಿದ ವರ್ಷ. ಈ ವರ್ಷಕ್ಕೆ ಇಂದು ರಾತ್ರಿ 12 ಗಂಟೆಗೆ ವಿದಾಯ ಹೇಳಿ, ಹೊಸ ವರ್ಷವನ್ನು ಸ್ವಾಗತಿಸಲಾಗುತ್ತದೆ.

ಆದರೆ ಹೊಸ ವರ್ಷವನ್ನು ಸಂಭ್ರಮದಿಂದ, ನಾಲ್ಕು ಮನೆಯವರು ಒಟ್ಟು ಸೇರಿ ಆಚರಣೆ ಮಾಡುವ ಆಗಿಲ್ಲ. ಯಾಕೆಂದರೆ ವರ್ಷದ ಕೊನೆಯಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಬ್ರಿಟನಿನಲ್ಲಿ ವಾರದ ಹಿಂದೆಯಷ್ಟೇ ಹೊಸ ಪ್ರಭೇದದ ವೈರಸ್ ಪತ್ತೆಯಾದರೆ, ಅಮೆರಿಕದಲ್ಲಿ ಮತ್ತೊಂದು ಪ್ರಭೇದ ಪತ್ತೆಯಾಗಿದೆ ಎಂದು ವರದಿಯಾಗಿದೆ. ಇದೀಗ ಬ್ರಿಟನ್ ಪ್ರಭೇದ ಭಾರತದಲ್ಲಿ ಸದ್ದು ಮಾಡಲು ತೊಡಗಿದೆ. ಈಗಾಗಲೇ ರಾಜ್ಯದಲ್ಲಿ 11 ಮಂದಿಯಲ್ಲಿ ಕೊರೊನಾ ರೂಪಾಂತರಿತ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷ ಆಚರಣೆಗೆ ಕಡಿವಾಣ ಹಾಕಲಾಗಿದೆ. ಈಗಾಗಲೇ ಬೀಚ್ ಗೆ ಸಾರ್ವಜನಿಕರು ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ. ಇನ್ನು ಸಾರ್ವಜನಿಕ ಪಾರ್ಟಿ ಆಯೋಜಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಡಿ. 31ರಂದು ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆ ವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ. 5ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ರಸ್ತೆ, ಬೀಚ್, ಮೈದಾನದಲ್ಲಿ ಹೊಸ ವರ್ಷ ಆಚರಣೆ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು