ಇತ್ತೀಚಿನ ಸುದ್ದಿ
ರಸ್ತೆಯಲ್ಲಿ ನಿಂತಿದ್ದ ಕಾರಿನ ಮೇಲೆ ಲಾರಿ ಉರುಳಿ ಬಿದ್ದು 8 ಮಂದಿ ದಾರುಣ ಸಾವು
December 2, 2020, 4:02 PM

ಲಕ್ನೋ: ಉತ್ತರ ಪ್ರದೇಶದ ಕೌಸುಂಭಿ ಜಿಲ್ಲೆಯಲ್ಲಿ ಭಾರೀ ದುರಂತ ಸಂಭವಿಸಿದೆ. ರಸ್ತೆಯಲ್ಲಿ ನಿಂತಿದ್ದ ಕಾರಿನ ಮೇಲೆ ಮರಳು ತುಂಬಿದ್ದ ಲಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ.
ಕಾರಿನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಮದುವೆ ಮುಗಿಸಿ ಮರಳುತ್ತಿದ್ದಾಗ ಈ ದುರಂತ ನಡೆದಿದೆ. ಅಗತ್ಯ ನೆರವು ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.