1:22 AM Sunday24 - January 2021
ಬ್ರೇಕಿಂಗ್ ನ್ಯೂಸ್
ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ? 

ಇತ್ತೀಚಿನ ಸುದ್ದಿ

ನಿವಾರ್ ಚಂಡಮಾರುತ: ಕೋಲಾರ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ

November 26, 2020, 6:28 PM

ಕೋಲಾರ (reporterkarnataka news): ನಿವಾರ್ ಚಂಡಮಾರುತದ ಪರಿಣಾಮ ಕೋಲಾರ ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜಿಲ್ಲೆಯಾದ್ಯಂತ ಮಳೆಯಿಂದ ಸಾರ್ವಜನಿಕ ಆಸ್ತಿ ಹಾಗೂ ಮಾನವ , ಜಾನುವಾರುಗಳ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರತಿದಿನ ಹಾನಿಯ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಸಿ. ಸತ್ಯಭಾಮ ಅವರು ತಹಶಿಲ್ದಾರರುಗಳಿಗೆ ಸೂಚಿಸಿದ್ದಾರೆ . 

ದಿನದ 24 ತಾಸು ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ . ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ . ಈಗಾಗಲೇ ಕಾರ್ಯನಿರ್ವಹಿಸುತ್ತಿದೆ . ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ – 1077 , 08152-243506 ವಿಪತ್ತಿನಲ್ಲಿರುವ ಸಾರ್ವಜನಿಕರು ಕರೆ ಮಾಡಿ ತಿಳಿಸಬಹುದಾಗಿದೆ . ಕಂಟ್ರೋಲ್ ರೂಂ ನ ಸಿಬ್ಬಂದಿ ಎನ್.ಗೋವಿಂದ ರಾಜು ಮೊಬೈಲ್ ಸಂಖ್ಯೆ 9740050061 , ವಿ.ಮಂಜುನಾಥ್ ಮೊಬೈಲ್ ಸಂಖ್ಯೆ 9141577499 ಅವರನ್ನು ಸಂಪರ್ಕಿಸಬಹುದಾಗಿದೆ . 

ನಿಯಂತ್ರಣ ಕ್ರಮಗಳು : ತಹಶೀಲ್ದಾರರು ತಮ್ಮ ಕಛೇರಿಗಳಲ್ಲಿ ಈ ಕೂಡಲೇ 24 * 7 ಕಂಟ್ರೋಲ್ ರೂಂಗಳನ್ನು ಚಾಲನೆಗೊಳಿಸಿ ಕಚೇರಿಯ ದೂರವಾಣಿಯ ಸೇವೆಯ ಬಗ್ಗೆ ಸಾರ್ವಜನಿಕರಿಗೆ ಪ್ರಚುರ ಪಡಿಸಿ , ನೈಸರ್ಗಿಕ ವಿಕೋಪಗಳಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ತಕ್ಷಣದಲ್ಲಿ ನಿವಾರಿಸುವಂತೆ ಕ್ರಮಗಳನ್ನು ಜರುಗಿಸಬೇಕು . ತಾಲ್ಲೂಕು ಕಂಟ್ರೋಲ್ ರೂಂಗಳ ದೂರವಾಣಿ ಸಂಖ್ಯೆ ಮತ್ತು ಕಾರ್ಯನಿರ್ವಹಿಸುವ ನೌಕರರ ವಿವರಗಳು , ಮೊಬೈಲ್ ಸಂಖ್ಯೆಯ ವಿವರಗಳನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಬೇಕು . 

ತಹಶೀಲ್ದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಯಾವುದೇ ಪೂರ್ವಾನುಮತಿ ಇಲ್ಲದೆ ತಮ್ಮ ಕೇಂದ್ರಸ್ಥಾನಗಳನ್ನು ಬಿಡದೆ , ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು ಸಾರ್ವಜನಿಕರಿಂದ ಸ್ವೀಕರಿಸಲಾಗುವ ಕುಂದು ಕೊರತೆಗಳು ಹಾಗೂ ಅಗತ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಬೇಕು . 

ಜಿಲ್ಲಾ ವ್ಯಾಪ್ತಿಯ ಆಯಾ ಗ್ರಾಮ ವೃತ್ತಗಳಿಗೆ ಸಂಬಂಧಿಸಿದ ಗ್ರಾಮಲೆಕ್ಕಾಧಿಕಾರಿಗಳು , ರಾಜಸ್ವ ನಿರೀಕ್ಷಕರು ಹಾಗೂ ಉಪ ತಹಶೀಲ್ದಾರರು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು ಸೂಕ್ತ ಕ್ರಮಗಳನ್ನು ಜರುಗಿಸಿ , ಹಾನಿಯ ಬಗ್ಗೆ ಪ್ರತಿದಿನ ವರದಿಯನ್ನು ತಹಶೀಲ್ದಾರರಿಗೆ ನೀಡಬೇಕು . 

ತುರ್ತು ಸಂದರ್ಭಗಳಲ್ಲಿ ಇತರೆ ಎಲ್ಲಾ ಇಲಾಖೆಗಳನ್ನು ಒಳಗೊಂಡಂತೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು . ಅತಿವೃಷ್ಟಿಯಿಂದ ಸಂಭವಿಸಲಾದ ಸಾರ್ವಜನಿಕರ ಆಸ್ತಿ ಹಾನಿ , ಮಾನವ ಅಥವಾ ಜಾನುವಾರು ಜೀವಹಾನಿ , ಬೆಳೆಹಾನಿ , ಮನೆಗಳ ಹಾನಿ ಬಗ್ಗೆ ಸಂಬಂಧಿಸಿದ ಗ್ರಾಮಲೆಕ್ಕಾಧಿಕಾರಿಗಳು , ರಾಜಸ್ವ ನಿರೀಕ್ಷಕರಿಂದ ವರದಿ ಪಡೆದು , ತಾಲ್ಲೂಕುವಾರು ಕ್ರೂಢಿಕರಿಸಿ ನಿಗಧಿತ ನಮೂನೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಪ್ರತಿದಿನ ಬೆಳಿಗ್ಗೆ 10.00 ಗಂಟೆಗೆ ಹಾಗೂ ಸಂಜೆ 4.00 ಗಂಟೆಗೆ ತಪ್ಪದೇ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು