8:36 PM Thursday28 - January 2021
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕದ ನಿರ್ಲಕ್ಷ್ಯ: ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್… ಇಬ್ಬರು ಪುತ್ರಿಯನ್ನು ಬೆತ್ತಲೆಗೊಳಿಸಿ ಬಡಿದು ಸಾಯಿಸಿದ ಪಾಪಿ ದಂಪತಿ ಶಿವ- ಪಾರ್ವತಿಯರಂತೆ!  ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ

ಇತ್ತೀಚಿನ ಸುದ್ದಿ

ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ ಅಲರ್ಟ್

November 24, 2020, 6:08 PM

ಬೆಂಗಳೂರು(reporterkarnataka news): ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ನಿವಾರ್ ಚಂಡಮಾರುತವಾಗಿ ಪರಿವರ್ತನೆಗೊಂಡ ಹಿನ್ನೆಲೆಯಲ್ಲಿ ನವೆಂಬರ್​ 25ರಿಂದ ಎರಡು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ.

ತಮಿಳುನಾಡಿನಲ್ಲಿ ಉಂಟಾಗುವ ಚಂಡ ಮಾರುತದ ಪ್ರಭಾವ ಕರ್ನಾಟಕಕ್ಕೂ ತಟ್ಟಲಿದ್ದು, ಬೆಂಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಜಂಟಿ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. 

ನಿವಾರ್ ಚಂಡಮಾರುತ ಚೆನ್ನೈನಿಂದ ಸುಮಾರು 470 ಕಿಲೋ ಮೀಟರ್ ದೂರದಲ್ಲಿ ಇದೆ. ಬುಧವಾರ ಮಧ್ಯಾಹ್ನ  ನಿವಾರ್ ಚಂಡಮಾರುತ ತಮಿಳುನಾಡಿನ  ತೀರ ತಲುಪಲಿದೆ. ಸಂಭಾವ್ಯ ಪರಿಸ್ಥಿತಿ ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಎನ್ ಡಿ ಆರ್ ಎಫ್ ನ 14 ತುಕುಡಿಗಳನ್ನು ರಕ್ಷಣಾ ಕಾರ್ಯಕ್ಕೆ  ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು