ಇತ್ತೀಚಿನ ಸುದ್ದಿ
ನ್ಯಾಯಾಂಗ ನಿಂದನೆಗೆ ದಂಡ: ವಕೀಲ ಪ್ರಶಾಂತ್ ಭೂಷಣ್ ಮೇಲ್ಮನವಿ
October 1, 2020, 1:04 PM

ನ್ಯಾಯಾಂಗ ನಿಂದನೆಗೆ ದಂಡ: ವಕೀಲ ಪ್ರಶಾಂತ್ ಭೂಷಣ್ ಮೇಲ್ಮನವಿ
ನವದೆಹಲಿ(reporterkarnataka news): ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಮಾನಿಸಿ ದಂಡ ವಿಧಿಸಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕುರಿತು ಪ್ರಶಾಂತ್ ಭೂಷಣ್ ಮಾಡಿದ್ದ ಟ್ವೀಟನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿತ್ತು. ಈ ಸಂಬಂಧ ಮೊಕದ್ದಮೆ ದಾಖಲಿಸಿತ್ತು.
ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಂತಿಮವಾಗಿ ಪ್ರಶಾಂತ್ ಭೂಷಣ್ ಗೆ ಒಂದು ರೂಪಾಯಿ ದಂಡ ವಿಧಿಸಿತ್ತು. ಇದೀಗ ಮತ್ತೊಮ್ಮೆ ಈ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕು ಎಂದು ಪ್ರಶಾಂತ್ ಭೂಷಣ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ