ಇತ್ತೀಚಿನ ಸುದ್ದಿ
ದರ ನಿಯಂತ್ರಣ: ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ
September 15, 2020, 8:42 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರ ಎಲ್ಲ ವಿಧದ ಈರುಳ್ಳಿ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ. ಈರುಳ್ಳಿ ದರ ನಿಯಂತ್ರಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ಕ ಮತ್ತು ಕರ್ನಾಟಕದಲ್ಲಿ ಇತ್ತೀಚೆಗೆ ಭಾರಿ ಪ್ರವಾಹ ಎದುರಾಗಿತ್ತು. ಇದರಿಂದ ಈರುಳ್ಳಿ ಬೆಳೆ ಹಾನಿಯಾಗಿದೆ. ಇದರಿಂದ ದೇಶದಲ್ಲಿ ಕೃತಕ ಅಭಾವ ಸೃಷ್ಟಿಯಾಗಿ ದರ ಹೆಚ್ಚಳವಾಗುವ ಸಾಧ್ಯತೆಯಿದೆ ಎಂಬ ಆತಂಕ ಎದುರಾಗಿದೆ.
ದೇಶದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯನ್ನು ಅಧ್ಯಯನ ಸಮಿತಿಯೊಂದು ಸೂಚಿಸಿತ್ತು