ಇತ್ತೀಚಿನ ಸುದ್ದಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರತಿಭಟನೆ: ಅಶ್ರುವಾಯು ಪ್ರಯೋಗ; ಓರ್ವ ಸಾವು
December 7, 2020, 6:34 PM

ಸಿಲಿಗುರಿ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಅಶ್ರುವಾಯು , ಲಾಠಿ ಚಾರ್ಚ್ ನಲ್ಲಿ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾನೆ.
ಪೊಲೀಸರು ನಡೆಸಿದ ದಾಳಿಯಲ್ಲಿ ಪಕ್ಷದ ಕಾರ್ಯಕರ್ತ ಉತೀನ್ ರಾಯ್ ಮೃತಪಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಕೂಡ ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು.
ಪೊಲೀಸರು ನಿರ್ಮಿಸಿದ ತಡೆಗೋಡೆಗಳನ್ನು ಮುರಿದು ಮುಂದಕ್ಕೆ ತೆರಳಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಅಶ್ರುವಾಯು ಸಿಡಿಸಿದ್ದಾರೆ.
ಘಟನೆಯಲ್ಲಿ ಬಿಜೆಪಿಯ ಕಾರ್ಯಕರ್ತ ಸಾವನ್ನಪ್ಪಿದ್ದು, ಇದಕ್ಕೆ ಪೊಲೀಸರೇ ಹೊಣೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.