ಇತ್ತೀಚಿನ ಸುದ್ದಿ
ಪದಚ್ಯುತಿ ಭೀತಿಯಿಂದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ?
November 29, 2020, 8:29 AM

ಬೆಂಗಳೂರು(reporterkarnataka news): ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಡಲು ತೆರೆಮರೆಯ ಪ್ರಯತ್ನ ನಡೆದ್ದದ್ದೆ ಸಂತೋಷ್ ಆತ್ಮಹತ್ಯೆ ಯತ್ನ ಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸಂತೋಷ್ ಅವರ ಪತ್ನಿ ಜಾಹ್ನವಿ ಕೂಡ ತಮ್ಮ ಪತಿ ತೀವ್ರ ರಾಜಕೀಯ ಒತ್ತಡದಲ್ಲಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಸಂತೋಷ್ ಅವರನ್ನು ದೂರ ಇರಿಸಲು ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಕೆಲವು ವ್ಯಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶರಾದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.