9:17 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಪದವಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟ

December 4, 2020, 8:52 PM


ಮಂಗಳೂರು (reporterkarnataka news)
: ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು  ಲಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜು ಮೊಗವೀರ   ಹೇಳಿದ್ದಾರೆ.

ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. 
ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. 

ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.   
ಭವ್ಯ ಇತಿಹಾಸವಿರುವ ವಿವಿ  ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ, ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು. 
    ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ., ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು