8:34 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್‌ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ

20/03/2022, 15:58

ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ. ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು