6:03 PM Monday16 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಪಾಲಿಕೆ: 500 ಚ.ಮೀ. ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಕಟ್ಟಡಗಳ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಅಧಿಕಾರ ವಲಯ ಕಚೇರಿಗೆ

19/08/2023, 09:44

ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ 500 ಚ.ಮೀ ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಮತ್ತು ಇತರ ಉದ್ದೇಶದ ಕಟ್ಟಡಗಳಿಗೆ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಹಾಗೂ ಪರವಾನಿಗೆ ನವೀಕರಣ ಹಾಗೂ ಕಟ್ಟಡ ದುರಸ್ತಿ ಸಂಬಂಧಪಟ್ಟ ಎಲ್ಲ ಕಡತಗಳನ್ನು ಆಯಾಯ ವಲಯ ಕಚೇರಿ ಹಂತದಲ್ಲಿ ಮುಕ್ತಾಯಗೊಳಿಸಲು ಆದೇಶ ಹೊರಡಿಸಲಾಗಿದೆ.
ಇನ್ನು ಮುಂದೆ ಸಲ್ಲಿಕೆಯಾಗುವ ಅರ್ಜಿಗಳನ್ನು ವಲಯ ಹಂತದಲ್ಲಿ ಸ್ವೀಕರಿಸಿ ಸಹಾಯಕ ನಗರ ಯೋಜನಾಧಿಕಾರಿಯವರ ವರದಿ ಆಧಾರದ ಮೇಲೆ ವಲಯ ಆಯುಕ್ತರಿಗೆ ಮಂಜೂರಾತಿಗೊಳಿಸುವ ಅಧಿಕಾರವನ್ನು ನೀಡಿ ಆದೇಶಿಸಲಾಗಿದೆ. ಅದರಂತೆ ಮೇಲ್ಕಂಡ ವಿಸ್ತೀರ್ಣಗೊಳಪಟ್ಟ ಕಡತಗಳನ್ನು 15 ದಿನಗಳ ಕಾಲಮಿತಿಯೊಳಗೆ ಹಾಗೂ ಸರ್ಕಾರದಿಂದ ಜಾರಿಗೆ ತಂದಿರುವ ನಿರ್ಮಾಣ್ 2 ಆನ್‍ಲೈನ್ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ನಿರ್ವಹಿಸಲು ನಿರ್ದೇಶನ ನೀಡಲಾಗಿರುತ್ತದೆ. ಅಲ್ಲದೆ ಜಂಟಿ ನಿರ್ದೇಶಕರು (ನಗರ ಯೋಜನೆ) ಪ್ರತೀ ತಿಂಗಳು ಆ ಕಡತಗಳ ವಿಲೇವಾರಿ ಪ್ರಗತಿಯನ್ನು ಪರಿಶೀಲಿಸುವಂತೆ ನಿರ್ದೇಶನ ನೀಡಲಾಗಿದೆ.
ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ವಾಸ್ತವ್ಯ, ವಾಣಿಜ್ಯ ಮತ್ತು ಇತರೆ ಕಟ್ಟಡಗಳ ಪರವಾನಿಗೆ ಮತ್ತು ಪ್ರವೇಶ ಪತ್ರಗಳ ಮಂಜೂರಾತಿ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ 250 ಚ.ಮೀ ವೀಸ್ತೀರ್ಣಕ್ಕೆ ಮೇಲ್ಪಟ್ಟ ಎಲ್ಲಾ ಕಡತಗಳು ಆಯುಕ್ತರ ಮಂಜೂರಾತಿಗಾಗಿ ಕೇಂದ್ರ ಕಚೇರಿಗೆ ಸಲ್ಲಿಸಬೇಕಾದ ವ್ಯವಸ್ಥೆ ಇತ್ತು. ಅದನ್ನು ಗಮನಿಸಿ ಈ ವ್ಯವಸ್ಥೆಯಲ್ಲಿನ ಕಡತಗಳ ಚಲನೆ ಹಾಗೂ ನಿರ್ವಹಣೆ ಬಗ್ಗೆ ಸಮರ್ಪಕವಾಗಿ ವಿಶ್ಲೇಷಿಸಿ, ಈ ಪದ್ದತಿಯಲ್ಲಿ ಕಂಡುಬಂದ ನ್ಯೂನ್ಯತೆಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳನ್ನು ಪರಿಹರಿಸುವ ಉದ್ದೇಶದಿಂದ, ಈ ವ್ಯವಸ್ಥೆಯನ್ನು ಸರಳೀಕರಣಗೊಳಿಸಲು ಕ್ರಮವಹಿಸಲಾಗಿದೆ.
ಅದರಂತೆ ಈ ಆದೇಶ ಹೊರಡಿಸಲಾಗಿದೆ. ಕಟ್ಟಡ ನಿರ್ಮಾಣ ಪರವಾನಿಗೆ ಮತ್ತು ಪ್ರವೇಶ ಪತ್ರಗಳಿಗೆ ಸಂಬಂಧಪಟ್ಟಂತೆ ಪ್ರತೀ ತಿಂಗಳು ಸರಾಸರಿ 150 ಅರ್ಜಿಗಳು ಸ್ವೀಕೃತವಾಗುತ್ತಿದ್ದು, ಈ ವ್ಯವಸ್ಥೆ ಜಾರಿಗೆ ತಂದ ಹಿನ್ನಲೆಯಲ್ಲಿ ಇನ್ನು ಮುಂದೆ ಕಟ್ಟಡ ನಿರ್ಮಾಣದಾರರು ಕೇಂದ್ರ ಕಚೇರಿಗೆ ಆಗಮಿಸಬೇಕಾದ ಅವಶ್ಯಕತೆಯಿಲ್ಲದೆ ನೇರವಾಗಿ ವಲಯ ಕಚೇರಿಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು