2:05 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಪಾಲಿಕೆ ನೂತನ ಕೌನ್ಸಿಲ್ ಮೊದಲ ಸಭೆಯಲ್ಲೇ ಕೋಲಾಹಲ: ನೀರಿನ ದರ ಇಳಿಕೆಗೆ ಅನುಮೋದನೆ

August 13, 2020, 3:25 PM

ಮಂಗಳೂರು(reporterkarnatakanews): ಮಂಗಳೂರು ಮಹಾನಗರಪಾಲಿಕೆಯಲ್ಲಿ ನೂತನ ಕೌನ್ಸಿಲ್ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ನಡೆದ ಪಾಲಿಕೆ ಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಸಾಕಷ್ಟು ಜಟಾಪಟಿ, ವಾಗ್ವಾದ ನಡೆಯಿತು.

6 ತಿಂಗಳ ನಂತರ ನಡೆದ ಕೌನ್ಸಿಲ್ ಸಭೆಯಲ್ಲಿ ಎಲ್ಲರಿಗೂ ಮಾತನಾಡಲು ಅವಕಾಶ ನೀಡಬೇಕು. ಎಲ್ಲ ಕಾರ್ಪೊರೇಟರ್ ಗಳಿಗೂ ಅವರ ವಾರ್ಡ್ ಗೆ ಸಂಬಂಧಿಸಿದ ಸಮಸ್ಯೆಗಳಿವೆ ಎಂದು ಪ್ರತಿಪಕ್ಷದ ನಾಯಕ ಅಬ್ದುಲ್ ರವೂಫ್ ಹೇಳಿದರು.

ಎಲ್ಲ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದ ಕುರಿತು ಕಾಂಗ್ರೆಸ್ ನ ಎ.ಸಿ. ವಿನಯರಾಜ್ ಅಸಮಾಧಾನ ವ್ಯಕ್ತಪಡಿಸಿ, ಇದು ಸದಸ್ಯರ ಹಕ್ಕುಚ್ಯುತಿ ಎಂದರು.

ತುಂಬೆ ನೀರು ಸ್ವಚ್ಛ ಮಾಡದೆ ಎರಡು ತಿಂಗಳ ಕಾಲ ಕಲುಷಿತ ನೀರು ಸರಬರಾಜು ಮಾಡಲಾಗಿದೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಕಾಂಗ್ರೆಸ್ ಸದಸ್ಯರು ಮೇಯರ್ ಪೀಠದ ಎದುರು ಧಾವಿಸಿ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ಪರವಾಗಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿದರು.

ವಾರ್ಡ್ ಸಮಿತಿ ರಚನೆ, ನೀರಿನ ದರ ಇಳಿಕೆ ಹಾಗೂ ಘನತ್ಯಾಜ್ಯ ತೆರಿಗೆ ಇಳಿಸಲು ಒಪ್ಪಿಗೆ ಸೂಚಿಸಲಾಯಿತು.

ಮೇಯರ್ ದಿವಾಕರ್ ಪಾಂಡೇಶ್ವರ ಅಧ್ಯಕ್ಷತೆ ವಹಿಸಿದ್ದರು. ಉಪ ಮೇಯರ್ ಜಾನಕಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು