ಇತ್ತೀಚಿನ ಸುದ್ದಿ
ಪಂಜಾಬಿನಲ್ಲಿ ಕಿಚ್ಚು ಹಚ್ಚಿದ ರೈತರ ಪ್ರತಿಭಟನೆ: ಹಲವು ರೈಲು ಸಂಚಾರ ರದ್ದು
October 4, 2020, 9:37 AM

ನವದೆಹಲಿ( reporterkarnataka news): ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ಪಂಜಾಬ್ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಆರು ರೈಲುಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ರದ್ದುಪಡಿಸಲಾಗಿದೆ. ಇದೇ ವೇಳೆ ಹರ್ಯಾಣದಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದಾರೆ.