ಇತ್ತೀಚಿನ ಸುದ್ದಿ
ದೀಪಾವಳಿ ಹಬ್ಬಕ್ಕೆ ರಾಜ್ಯದಲ್ಲಿ ಪಟಾಕಿ ನಿಷೇಧ:ಸರಕಾರದಿಂದ ಶೀಘ್ರದಲ್ಲೇ ಆದೇಶ ಜಾರಿ
November 6, 2020, 5:04 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ಹಚ್ಚುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸುವುದಾಗಿಯೂ ಅವರು ಹೇಳಿದ್ದಾರೆ.
ಪರಿಸರ ಮಾಲಿನ್ಯ ತಡೆಗಟ್ಟಲು ಮತ್ತು ಕೊರೋನಾ ನಿಯಂತ್ರಿಸಲು ಇದು ಅನಿವಾರ್ಯ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ