9:12 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಪಟಾಕಿ ಹಾನಿ ಪ್ರಕರಣ ಗಣನೀಯ ಇಳಿಮುಖ:ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಸಂತಸ

November 17, 2020, 8:46 PM

ಕೋಲಾರ(reporterkarnataka news): ಬೆಳಕಿನ ಹಬ್ಬವಾದ ದೀಪಾವಳಿಯಂದು ಪಟಾಕಿ ಸಿಡಿಸುವಾಗ ಈ ಬಾರಿ ದೃಷ್ಟಿದೋಷದಂತಹ ಯಾವುದೇ ಗಂಭೀರ ಪ್ರಕರಣಗಳು ವರದಿಯಾಗಿಲ್ಲವಾದರೂ, ತಾಲ್ಲೂಕಿನ ವಿವಿಧೆಡೆ 10ಕ್ಕೂ ಹೆಚ್ಚು ಮಂದಿ ಮಕ್ಕಳು, ಹಿರಿಯರು ಸಣ್ಣಪುಟ್ಟ ಕಣ್ಣಿನ ಸಮಸ್ಯೆಗಳು, ಸುಟ್ಟಗಾಯಗಳಿಂದ ಚಿಕಿತ್ಸೆಗೆ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ನಗರದ ವಿವೇಕ ನೇತ್ರಾಲಯವೊಂದರಲ್ಲೇ 5 ಮಂದಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ನೇತ್ರ ತಜ್ಞ ಡಾ. ಎಚ್.ಆರ್. ಮಂಜುನಾಥ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಮುನ್ನಚ್ಚರಿಕೆ ದೃಷ್ಟಿಯಿಂದ ದಿನದ 24 ಗಂಟೆಗಳು ತುರ್ತು ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದ್ದು, ಸಂಪೂರ್ಣ ದೃಷ್ಟಿಹಾನಿಯಂತಹ ಯಾವುದೇ ಪ್ರಕರಣಗಳು ವರದಿಯಾಗಲ್ಲ ಎಂದು ತಿಳಿಸಿದರು.

ಬೆಳಕಿನ ಹಬ್ಬದಲ್ಲಿ ಮಕ್ಕಳು ಸಂಭ್ರಮದಿಂದ ಪಟಾಕಿ ಸಿಡಿಸುವಾಗ ಚಿಣ್ಣರಿಗೆ ಮಾತ್ರವಲ್ಲದೇ ಪೋಷಕರ ಕಣ್ಣಿಗೂ ಹಾನಿಯಾಗಿದ್ದು, ತಮ್ಮಲ್ಲಿಗೆ ಬಂದ ಐವರಿಗೆ ಸಣ್ಣಪುಟ್ಟ ಪ್ರಮಾಣದಲ್ಲಿ ತೊಂದರೆಯಾಗಿದೆ ಎಂದು ತಿಳಿಸಿದರು.

ಸಾಮಾನ್ಯವಾಗಿ ಪಟಾಕಿ ಸಿಡಿಸುವಾಗ ಪಟಾಕಿಯೊಳಗಿನ ರಾಸಾಯನಿಕದಿಂದ, ಸಿಡಿತದ ವೇಗಕ್ಕೆ ಮಣ್ಣು ಮತ್ತು ಬೆಂಕಿಯಿಂದ ಎರಡೂ ರೀತಿಯ ಸಮಸ್ಯೆ ಎದುರಾಗುತ್ತದೆ ಎಂದು ಅವರು ತಿಳಿಸಿದರು.

ಪಟಾಕಿ ಕಡಿಮೆ ಹಾನಿಯೂ ಇಲ್ಲ: ನಗರದ ಶಂಕರ ನೇತ್ರಾಲಯಕ್ಕೆ ಈ ಬಾರಿ ಯಾವುದೇ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದ ಪ್ರಕರಣ ಬಂದಿಲ್ಲ ಎಂದು ನೇತ್ರ ತಜ್ಞ ಡಾ.ಶಂಕರ್ ನಾಯಕ್ ತಿಳಿಸಿದರು.

ಈ ಬಾರಿ ಪಟಾಕಿ ಬಳಕೆ ಪ್ರಮಾಣವೂ ಕಡಿಮೆಯಾಗಿದೆ, ಆದ್ದರಿಂದಾಗಿ ಕಣ್ಣಿಗೆ ಹಾನಿಯೂ ಆಗಿಲ್ಲ ಎಂದ ಅವರು, ಸಾರ್ವಜನಿಕರಲ್ಲಿ ಪಟಾಕಿ ಸಿಡಿಸುವುದರಿಂದಾಗುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ವೈದ್ಯ  ಎಚ್.ಆರ್. ಮಂಜುನಾಥ್ ಅವರು ಹೇಳುವಂತೆ ಪಟಾಕಿ ಸಿಡಿಸುವುದನ್ನೇ ಬಿಟ್ಟರೆ ಒಳಿತು, ಪರಿಸರ ಮಾತ್ರವಲ್ಲ ಕಣ್ಣಿನ ರಕ್ಷಣೆಗೂ ಸಹಕಾರಿ ಎಂದರು.

ಇಷ್ಟಕ್ಕೂ ಪಟಾಕಿ ಸಿಡಿಸಲೇ ಬೇಕಾದಲ್ಲಿ ಪೋಷಕರು ಎಚ್ಚರಿಕೆಯಿಂದ ಮಕ್ಕಳಿಂದ ಪಟಾಕಿ ಹೊಡೆಸಬೇಕು ಎಂದು ತಿಳಿಸಿದರು.

ಸುಟ್ಟ ಗಾಯಗಳಿಗೆ ಆಯುರ್ವೇದ ಚಿಕಿತ್ಸೆ : ನಗರದ ಹಳೆ ಮಾಧ್ಯಮಿಕ ಶಾಲೆ ಎದುರಿಗಿರುವ ವೆಂಕಟೇಶ ಶೆಟ್ಟಿ ಸುಟ್ಟಗಾಯಗಳ ಚಿಕಿತ್ಸಾಲಯಕ್ಕೆ ದೀಪಾವಳಿ ನಂತರದ ಭಾನುವಾರ ಮತ್ತು ಮತ್ತು ಸೋಮವಾರ ಸುಟ್ಟ ಗಾಯಗಳಿಂದ 10ಕ್ಕೂ ಹೆಚ್ಚು ಮಂದಿ ಬಂದಿದ್ದು, ಇದರಲ್ಲಿ ಐವರು ಮಂದಿ ಪಟಾಕಿ ಸಿಡಿತದಿಂದ ಗಾಯಗೊಂಡವರು ಎಂದು ತಿಳಿಸಿದರು.

ಪ್ರತಿವರ್ಷ ಅಡುಗೆ ಎಣ್ಣೆ,ಪಟಾಕಿ ಬೆಂಕಿಯ ಸುಟ್ಟ ಗಾಯಗಳ 25ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಈ ಬಾರಿ ಕಡಿಮೆಯಾಗಿರುವ ಕುರಿತು ಸಂತಸ ವ್ಯಕ್ತಪಡಿಸಿ, ಜನತೆಯಲ್ಲಿ ಅರಿವು ಮೂಡಿದೆ ಎಂದರು.

ನಗರದ ಎಸ್‍ಎನ್‍ಆರ್ ಆಸ್ಪತ್ರೆ, ಜಾಲಪ್ಪ ಆಸ್ಪತ್ರೆ, ನೇತ್ರದೀಪ ಕಣ್ಣಿನ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಒಂದೆರಡು ಪ್ರಕರಣಗಳ ವರದಿಯಾಗಿದ್ದು, ಒಟ್ಟಾರೆ ಈ ಬಾರಿ ಪಟಾಕಿಯಿಂದಾದ ಹಾನಿಯ ಪ್ರಮಾಣ ಕಡಿಮೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು